ಶಿವಮೊಗ್ಗ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಕುರಿತಾಗಿ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಬಜೆಟ್ ನಂತರ ಅಧಿಕಾರ ಹಸ್ತಾಂತರದ ಬಗ್ಗೆ ದೆಹಲಿ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬಜೆಟ್ ನಂತರ ಅಧಿಕಾರ ಹಸ್ತಾಂತರ ನಿರ್ಧಾರವಾಗುತ್ತದೆ.
ಆದರೆ, ಸಿಎಂ ರೇಸ್ ನಲ್ಲಿ ಸದ್ಯ ನಾನು ಇಲ್ಲ. ಅವಕಾಶ ಬಂದಾಗ ನೋಡೋಣ, ನಾನು ಬ್ಯಾಟಿಂಗ್ ಚೆನ್ನಾಗಿ ಮಾಡುತ್ತೇನೆ. ಆದರೆ ರಾಜಕೀಯದಲ್ಲಿ ಗೂಗ್ಲಿ ಹಾಕಲೇಬೇಕು. ಇಲ್ಲವಾದಲ್ಲಿ ಯಶಸ್ಸು ಸಿಗಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಈಗ ನಾನು ಮಾತನಾಡುವುದಿಲ್ಲ. ಅದು ಇನ್ನೂ ದೊಡ್ಡ ಮ್ಯಾಚ್ ಆಗಿದೆ. ಮುಂದೆ ನೋಡೋಣ ಎಂದು ಹೇಳಿದ್ದಾರೆ.




