Ad imageAd image

ಮಹಾರಾಷ್ಟ್ರದಿಂದ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿಗೆ ಚಿಂತನೆ : ಸತೀಶ್ ಜಾರಕಿಹೊಳಿ

Bharath Vaibhav
ಮಹಾರಾಷ್ಟ್ರದಿಂದ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿಗೆ ಚಿಂತನೆ : ಸತೀಶ್ ಜಾರಕಿಹೊಳಿ
WhatsApp Group Join Now
Telegram Group Join Now

ಬೆಳಗಾವಿ : ಕರ್ನಾಟಕದಲ್ಲಿ ಬೇಸಿಗೆಯ ಬಿಸಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ನಿರೀಕ್ಷೆ ಇದೆ.

ಹಿಪ್ಪರಗಿ ಬ್ಯಾರೇಜ್‌ನ 22ನೇ ಕ್ರಸ್ಟ್ ಗೇಟ್ ಮುರಿದು ಸುಮಾರು 2-3 ಟಿಎಂಸಿ ನೀರು ನಷ್ಟವಾಗಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಮಸ್ಯೆ ಉಂಟಾಗಬಹುದು.

ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ವಿವಿಧ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಸಿಇಓ ರಾಹುಲ್ ಶಿಂಧೆ, ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲವೆಂದು ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ ಯಾವುದಾದರೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಕೊರತೆ ಉಂಟಾದಲ್ಲಿ, ತಕ್ಷಣ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ಸಚಿವರು ಸೂಚನೆ ನೀಡಿದರು.

ಟ್ಯಾಂಕರ್‌ಗಳಿಲ್ಲದ ಗ್ರಾಮ ಪಂಚಾಯಿತಿಗಳು ಅವುಗಳನ್ನು ಖರೀದಿಸುವಂತೆ ತಿಳಿಸಿದರು. ಏಪ್ರಿಲ್ ನಂತರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ಕೊಟ್ಟರು.

ಹಿಪ್ಪರಗಿ ಬ್ಯಾರೇಜ್‌ನ 22ನೇ ಕ್ರಸ್ಟ್ ಗೇಟ್ ಮುರಿದು ಸುಮಾರು 2-3 ಟಿಎಂಸಿ ನೀರು ನಷ್ಟವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದಿಂದ ಸುಮಾರು 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದರು.

ಸಚಿವರು ಮಾತನಾಡಿ, “ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ಸುಮಾರು ಶೇ 85ರಷ್ಟು ಪೂರ್ಣಗೊಂಡಿದ್ದು, ಅದನ್ನು ಶೇ 92ರ ಗುರಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಮತದಾರರ ಕುರಿತಾದ ಆರೋಪಗಳ ಬಗ್ಗೆ ಮುಂದಿನ ವಾರ ಮತ್ತೊಂದು ಸಭೆ ನಡೆಸಲಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಸಚಿವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ನೂತನ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ, ಅವುಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!