ಚಿಕ್ಕಮಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸತೀಶ್ ಜಾರಕಿಹೊಳಿ ಕೊನೆಗೂ ಬೆಂಗಳೂರು ಕಾಲ್ತುಳಿತ ಪ್ರಕರಣದಕ್ಕೆ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಸರ್ಕಾರ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರೆ ಹನ್ನೊಂದು ಜನರ ಸಾವು ಸಂಭವಿಸುತ್ತಿರಲಿಲ್ಲ ಎಂದಿದ್ದಾರೆ.
ಭದ್ರತೆಯಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರ ಫೇಲ್ ಆಗಿರುವುದಂತೂ ನಿಜ. ಸರ್ಕಾರದ ವೈಫಲ್ಯದಿಂದಲೇ ದುರಂತ ಸಂಭವಿಸಿದೆ ಎಂದು ನುಡಿದ ಸತೀಶ್ ಜಾರಕಿಹೊಳಿ, ಹಾಗೆಂದ ಮಾತ್ರಕ್ಕೆ ಯಾರೂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಹಿಂದೆಯೂ ರಾಜ್ಯದಲ್ಲಿ ಸಾಕಷ್ಟು ಅವಘಡಗಳು ಸಂಭವಿಸಿದೆ. ಆದರೆ ಯಾರೂ ರಾಜೀನಾಮೆ ಕೊಟ್ಟಿಲ್ಲ. ಈಗ ಸಮಸ್ಯೆಗೆ ಪರಿಹಾರ ಹುಡುಕುವುದು ಮುಖ್ಯವೇ ಹೊರತು ರಾಜೀನಾಮೆ ನೀಡುವುದಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.




