Ad imageAd image

ಕಿತ್ತೂರು ಉತ್ಸವಕ್ಕೆ 5 ಕೋಟಿ ರೂಪಾಯಿಗೆ ಪ್ರಸ್ತಾವನೆ : ಸತೀಶ್ ಜಾರಕಿಹೊಳಿ 

Bharath Vaibhav
ಕಿತ್ತೂರು ಉತ್ಸವಕ್ಕೆ 5 ಕೋಟಿ ರೂಪಾಯಿಗೆ ಪ್ರಸ್ತಾವನೆ : ಸತೀಶ್ ಜಾರಕಿಹೊಳಿ 
WhatsApp Group Join Now
Telegram Group Join Now

ಬೆಳಗಾವಿ: ಪ್ರತಿ ವರ್ಷದಂತೆ ಈ ಬಾರಿಯೂ ಕಿತ್ತೂರು ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಈ ಬಾರಿ ಕಿತ್ತೂರು ಉತ್ಸವವನ್ನು ಮಾದರಿ ರೀತಿಯಲ್ಲಿ ಆಚರಿಸುವ ಯೋಜನೆಯಿದ್ದು, ಜನರು ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ (ಅ.06) ನಡೆದ ಕಿತ್ತೂರು ಉತ್ಸವ- 2025ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ಸವದಲ್ಲಿ ಸ್ಥಳೀಯರಿಗೆ ಅವಕಾಶ ಕಲ್ಪಿಸಿ, ಕಿತ್ತೂರಿನ ಸ್ಮಾರಕಗಳ ಸುಧಾರಣೆಗೊಳಿಸಿ, ದೀಪಾಲಂಕಾರ, ಸೇತುವೆ ಸ್ವಚ್ಛತೆ, ಬಸ್ ನಿಲ್ದಾಣದ ದುರಸ್ಥಿ ಕಾಮಗಾರಿ ಕೈಗೊಳ್ಳಲಾಗುವುದು‌.

ಹೊಸ ಸಾಹಿತಿಗಳು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಬದಲಾವಣೆಗೆ ತಿಳಿಸಲಾಗಿದ್ದು, ಕಿತ್ತೂರು ಉತ್ಸವ ಮಾದರಿ ಉತ್ಸವವನ್ನಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!