ಮೈಸೂರು : ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ದಾಳಿಗೆ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಖಂಡನೆ ವ್ಯಕ್ತಪಡಿಸಿದ್ದು, ಉಗ್ರರ ದಾಳಿಗೆ ಕೆಲ ಕನ್ನಡಿಗರು ಬಲಿಯಾಗಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.
ಈ ಬಗ್ಗೆ ಮಾತನಾಡಿದ ಅವರು, ಹಿಂದುಗಳನ್ನೇ ಟಾರ್ಗೆಟ್ ಮಾಡಿ ಈ ಹತ್ಯೆ ಮಾಡಲಾಗಿದೆ. ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರ ನಡೆಸುತ್ತಿರಲಿ, ಈ ಸಂದರ್ಭದಲ್ಲಿ ತಮ್ಮ ಸರ್ಕಾರ ಅದರ ಜೊತೆ ನಿಲ್ಲುತ್ತದೆ, ರಾಜ್ಯದ ಎಲ್ಲಾ ಪಕ್ಷದ ನಾಯಕರು ಇದಕ್ಕೆ ಬೆಂಬಲ ನೀಡುತ್ತಾರೆ ಎಂದು ಹೇಳಿದರು.
ಹಿಂದೂಗಳನ್ನೇ ಗುರಿಯಾಗಿಸಿ ದಾಳಿ ನಡೆಸಿದ ಉಗ್ರರು ಯಾರು, ಎಲ್ಲಿಂದ ಬಂದಿದ್ದರು ಮತ್ತು ಅವರ ಉದ್ದೇಶ ಏನಾಗಿತ್ತು ಅನ್ನೋದನ್ನು ಕೇಂದ್ರ ಸರ್ಕಾರ ಪತ್ತೆ ಮಾಡುತ್ತದೆ, ಕ್ರಮ ತೆಗೆದುಕೊಳ್ಳುತ್ತದೆ. ಕೇಂದ್ರದ ಜೊತೆ ಸದಾ ನಾವು ಇರುತ್ತೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಕೆಲವರು ಈ ದಾಳಿಗೆ ಕೇಂದ್ರ ಸರ್ಕಾರನೇ ಕಾರಣ ಎಂದು ಹೇಳುತ್ತಿದ್ದಾರೆ. ಅದೆಲ್ಲ ಅವರ ವೈಯಕ್ತಿಕ, ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎರಡ್ಮೂರು ದಿನಗಳಲ್ಲಿ ವರದಿ ಬರಬಹುದು ಆಗ ದಾಳಿಯ ಹಿಂದೆ ಯಾರಿದ್ದಾರೆ ಅಂತ ಗೊತ್ತಾಗುತ್ತದೆ, ಹಾಗಂತ ಕೇಂದ್ರದ ಕಡೆ ಬೆಟ್ಟು ಮಾಡುವುದು ಸರಿಯಲ್ಲ ಎಂದು ಜಾರಕಿಹೊಳಿ ಹೇಳಿದರು.