ಹುಬ್ಬಳ್ಳಿ: ಹಿರಿಯ ನಾಗರಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ ಡಿ. ೧೬ ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಹಿರಿಯ ನಾಗರಿಕರ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಬಿ.ಎ.ಪಾಟೀಲ್ ತಿಳಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಎಲ್ಲಾ ಹಿರಿಯ ನಾಗರಿಕರು ರಾಷ್ಟ್ರದ ಸಂಪತ್ತು ಎಂದು ಘೋಷಣೆ ಮಾಡಬೇಕು, ಆರ್ಥಿಕವಾಗಿ ದುರ್ಬಲರಾದ ಹಿರಿಯ ನಾಗರಿಕರಿಗೆ ಮಾಸಿಕ ೧೦ ಸಾವಿರ ವೃದ್ಧಾಪ್ಯ ವೇತನ ನೀಡಬೇಕು, ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಚಿವಾಲಯ, ಸಚಿವರು ಹಾಗೂ ಬಜೆಟ್ ಮಂಡನೆಯಾಗಬೇಕು,ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವದು, ಈಗ ಮಹಿಳಾ ಹಿರಿಯ ನಾಗರಿಕರಿಗೆ ಮಾತ್ರ ನೀಡಲಾಗಿದೆ, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಚಿಕಿತ್ಸಾ ವಿಭಾಗ ಆರಂಭಿಸಬೇಕು, ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟಿ.ಡಿ. ಪಾಟೀಲ್, ಡಾ.ಲಿಂಗರಾಜ ಪಾಟೀಲ್, ಡಾ. ಸುನಂದಾ ಬೆನ್ನೂರ, ಎಸ್.ಎಂ.ಕೋಳೂರ ಉಪಸ್ಥಿತರಿದ್ದರು.
ವರದಿ : ಸುಧೀರ್ ಕುಲಕರ್ಣಿ




