ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರದ ಸೌರಭ ಕಾನ್ವೆಂಟಿನ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ ಎಂದು ಕಾನ್ವೆಂಟಿನ ಮುಖ್ಯ ಶಿಕ್ಷಕ ಮುನಿರಾಜು ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆಗಸ್ಟ್ 25ರಂದು ನಡೆದ ಮಾಯಸಂದ್ರ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹಲವು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಕಾನ್ವೆಂಟಿನ 7 ನೇ ತರಗತಿ ವಿದ್ಯಾರ್ಥಿನಿ ಖುಷಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಮೊಹಮದ್ ಸೈಫ್ 100 ಮೀಟರ್ ಓಟದಲ್ಲಿ ತೃತೀಯ, ಬಾಲಕಿಯರ ಥ್ರೋಬಾಲ್ ತಂಡ ತೃತೀಯ ಸ್ಥಾನ, ಬಾಲಕರ ಥ್ರೋಬಾಲ್ ತಂಡವು ದ್ವಿತೀಯ, ಬಾಲಕರ ಕಬ್ಬಡಿ ತಂಡವು ನಾಲ್ಕನೇ ಸ್ಥಾನ ಗಳಿಸಿ ಬಹುಮಾನ ಹಾಗೂ ಪ್ರಶಸ್ತಿ ಪಡೆದಿದೆ ಎಂದರು.

ಕ್ರೀಡಾಕೂಟದಲ್ಲಿ ಕ್ರೀಡಾಸ್ಪೂರ್ತಿಯಿಂದ ಉತ್ತಮ ಆಟ ಪ್ರದರ್ಶಿಸಿ ಹಲವು ಕ್ರೀಡೆಗಳಲ್ಲಿ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯದರ್ಶಿ ಕಲ್ಪನಾ, ಶಾಲೆಯ ಮುಖ್ಯಶಿಕ್ಷಕ ಮುನಿರಾಜು, ದೈಹಿಕ ಶಿಕ್ಷಕಿ ಗೀತಾಮಣಿ ಸೇರಿದಂತೆ ಬೋಧಕ, ಬೋಧಕೇತರ ವರ್ಗ ಅಭಿನಂದಿಸಿದೆ.
ವರದಿ: ಗಿರೀಶ್ ಕೆ ಭಟ್




