ಬೆಳಗಾವಿ : ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ಸ್ವಪಕ್ಷದ ಸಚಿವರು ಶಾಸಕರುಗಳೇ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ನಾನು ಏನು ಹೇಳಬೇಕು ಅದನ್ನು ಹೇಳಿ ಆಗಿದೆ ನನ್ನ ಹೇಳಿಕೆ ಕುರಿತು ಬೇರೆಯವರು ಏನು ಹೇಳುತ್ತಾರೋ ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಮತ್ತೆ ತಮ್ಮ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಇದೆ ವಿಚಾರವಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಪುತ್ರನ ಜೊತೆಗೆ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಸುಮಾರು ಒಂದು ಗಂಟೆಗಳ ಸುದೀರ್ಘವಾಗಿ ಚರ್ಚೆ ನಡೆಸಿದರು. ಆ ರೀತಿ ಹೇಳಿಕೆ ನೀಡಬೇಡ ಅಂತ ಯತೀಂದ್ರ ಅವರಿಗೆ ಸಿದ್ದರಾಮಯ್ಯ ಹೇಳಿದರು ಕೂಡ ಯತೀಂದ್ರ ಮಾತ್ರ ತಂದೆಯ ಮಾತಿಗೂ ಬಗ್ಗದೇ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.




