Ad imageAd image

ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ!

Bharath Vaibhav
ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ!
WhatsApp Group Join Now
Telegram Group Join Now

ಸಿಂಧನೂರು : ಜುಲೈ 25ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿಂಧನೂರು ನಗರದ ಮಿನಿ ವಿಧಾನಸೌಧದ ಮುಂದೆ ವಿದ್ಯಾರ್ಥಿಗಳು ಪ್ರತಿಭಟಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲ ಸೌಕರ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಮಾನ್ಯ ತಹಸಿಲ್ದಾರ್ ರರಿಗೆ ಸಲ್ಲಿಸಿದರು.

ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿ ಆಗಬೇಕಾದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಆದ್ಯ ಕರ್ತವ್ಯ ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಆದರೆ ಅವುಗಳು ಸಮರ್ಪಕ ಅನುಷ್ಠಾನವಾಗಿದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂಥಾಗಿದೆ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸುವುದು ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾದ ಜಮೆಯಾಗಾದೆ ಇರುವುದು ರೈತ ವಿದ್ಯಾನಿಧಿಯನ್ನು ರದ್ದುಗೊಳಿಸುವುದು ಇನ್ನುಳಿದ ವಿದ್ಯಾರ್ಥಿ ವೇತನ ಸರಿಯಾಗಿ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರು ತಕ್ಷಣ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ – ಪ್ರದೀಪ್ ಪಾಟೀಲ್ ರಾಜ್ಯ ಕಾರ್ಯಕಾರಿಣಿ ಸದಸ್ಯರು, ವೀರಭದ್ರ ಸ್ವಾಮಿ ಸಹ ಕಾರ್ಯದರ್ಶಿ, ಮುದಿಯಪ್ಪ ವಿದ್ಯಾರ್ಥಿ ಪ್ರಮುಖ, ಗಣೇಶ್ ಬಾದರ್ಲಿ ಹಿರಿಯ ಕಾರ್ಯಕರ್ತ ಈ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ವರದಿ : ಬಸವರಾಜ ಬುಕ್ಕನಹಟ್ಟಿ

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!