Ad imageAd image

ಶಾಕಂಭರೀ ವಿದ್ಯಾನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸ

Bharath Vaibhav
WhatsApp Group Join Now
Telegram Group Join Now

ಬಾದಾಮಿ :-ಚೊಳಚಗುಡ್ಡದ ಶಾಕಂಭರೀ ವಿದ್ಯಾನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದಲ್ಲಿನ ಶಾಕಂಭರೀ ವಿದ್ಯಾನಿಕೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿ ವಿಜೃಂಭಣೆಯಿಂದ ನೆರವೇರಿಸಲಾಯಿತು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿಯ ಮೂಲಕ ಡೊಳ್ಳು ವಾದ್ಯಗಳ ಮೂಲಕ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಕ್ಕಳನ್ನು ಎತ್ತಿನ ಗಾಡಿಯಲ್ಲಿ

ಮೆರವಣಿಗೆಯ ಮೂಲಕ ಶಾಲೆಗೆ ಕರೆ ತರಲಾಯಿತು. ಗ್ರಾಮ ಪಂಚಾಯತ್ ಸದಸ್ಯರು ಊರಿನ ಗುರುಹಿರಿಯರು ರೈತ ಬಾಂಧವರು ದುರ್ಗಾದೇವಿ ಡೊಳ್ಳಿನ ಬಳಗದ ಸದಸ್ಯರು,, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್ ವೈ ಕುಂದರಗಿ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ ಬಿ ದೊಡ್ಡಪ್ಪನವರ್,, ಸಿ ಆರ್ ಪಿ ಸುರೇಶ್ ಬೊಂಬ್ಲೆ,, ಸಂಸ್ಥೆಯ ಗೌರವ ಕಾರ್ಯದರ್ಶಿ ಡಾಕ್ಟರ್ ಗಿರೀಶ್ ದಾನಪ್ಪಗೌಡರ್,, ಮುಖ್ಯ ಗುರುಗಳಾದ ಪ್ರಶಾಂತ್ ಪಡಿಯಪ್ಪನವರ,, ಹಾಗೂ ಶಾಲಾ ಶಿಕ್ಷಕ ವೃಂದದವರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ವರದಿ:- ರಾಜೇಶ್. ಎಸ್. ದೇಸಾಯಿ

WhatsApp Group Join Now
Telegram Group Join Now
Share This Article
error: Content is protected !!