ಮುದಗಲ್ಲ :- ಎಸ್. ವ್ಹಿ .ಎಮ್ ಪ್ರೌಢ ಶಾಲೆಯಲ್ಲಿ ಮಕ್ಕಳ ಸಂಸತ್ ಚುನಾವಣೆ ನಡೆಯಿತು .ಇಲ್ಲಿ ಮಕ್ಕಳೇ ಸ್ಪರ್ಧಾಳುಗಳು, ಮಕ್ಕಳೇ ಮತ ಚಲಾಯಿಸುವವರು. ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಶಾಲೆಯಲ್ಲಿ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಲು ಕಾತುರರಾಗಿದ್ದಾರೆ. ಇಡೀ ಶಾಲಾ ವಾತಾವರಣ ಚುನಾವಣಾ ಪ್ರಕ್ರಿಯೆಯಲ್ಲಿ ಮುಳುಗಿಹೋಗಿದೆ.
ಇಂದಿನ ಮಕ್ಕಳೇ ಇಂದಿನ ನಾಯಕರು ಎಂದು ಹೇಳುವಾಗ ಮಕ್ಕಳಲ್ಲಿ ನಾಯಕತ್ವ ಹಾಗೂ ಜವಾಬ್ದಾರಿ ನಿರ್ವಹಣಾ ಸಾಮರ್ಥ್ಯ ಅಭಿವೃದ್ದಿಪಡಿಸುವ ಅಗತ್ಯತೆ ಎದ್ದು ಕಾಣುತ್ತಿದೆ. ಮಕ್ಕಳಲ್ಲಿ ಇಂತಹ ಗುಣಗಳನ್ನು ಬೆಳೆಸುವಲ್ಲಿ ಮಕ್ಕಳ ಸಂಸತ್ತು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಎಸ್.ವ್ಹಿ.ಎಮ್.ಪ್ರೌಡ ಶಾಲೆಯ ಕಾರ್ಯದರ್ಶಿಗಳಾದ ಸಂಗಯ್ಯ.ವ್ಹಿ. ಅವರು ಈ ಸಂದರ್ಭದಲ್ಲಿ ಮಾತನಾಡಿದರು
ಮಕ್ಕಳ ಸಂಸತ್ ಎಂಬುದು ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು, ಶಾಲಾ ಸಿಬ್ಬಂದಿ ಜೊತೆ ಶಾಲಾ ನಿರ್ವಹಣೆಯಲ್ಲಿ ಮಕ್ಕಳನ್ನೂ ಪಾಲುದಾರರನ್ನಾಗಿ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಜವಬ್ದಾರಿ ನಿರ್ವಹಣೆಯ ಜೊತೆಗೆ ಶಾಲಾ ಆಡಳಿತದಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ಭಾವೀ ನಾಗರಿಕರನ್ನು ಬೆಳೆಸಲು ಅನುಕೂಲವಾಗುತ್ತದೆ.
ಮಕ್ಕಳೂ ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜೊತೆಜೊತೆಗೆ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿದರೆ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ಕಾಣಿಕೆಯಾಗಿ ನೀಡಬಹುದು ಮುಖ್ಯ ಉದ್ದೇಶ ವಾಗಿದೆ
ಈ ಹಿನ್ನಲೆಯಲ್ಲಿ ಮಕ್ಕಳ ಸಂಸತ್ತು ಹೆಚ್ಚು ಮಹತ್ವ ಪಡೆದಿದೆ. ಶಾಲೆಯ ಪ್ರತಿಯೊಂದು ಚಟುವಟಿಕೆ ಹಾಗೂ ಕಾರ್ಯಕ್ರಮಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಮತ್ತು ಅಭಿವ್ಯಕ್ತಿ ಪ್ರಕ್ರಿಯೆ ಅತ್ಯಂತ ಮಹತ್ವದ್ದು. ಶಾಲೆಗೆ ಸಂಬಂಧಿಸಿದ ಕೆಲ ಚಟುವಟಿಕೆಗಳಲ್ಲಿ ನಿರ್ಣಯಗಳನ್ನು ಕೈಗೊಳ್ಳಲು ಮಕ್ಕಳೂ ಕೂಡಾ ಅರ್ಹರು. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪ್ರಕಾರ ಮಕ್ಕಳಿಗೆ ಸಂಬಂಧಿಸಿದ ಪ್ರತಿಯೊಂದು ಚಟುವಟಿಕೆ ಹಾಗೂ ನಿರ್ಣಯಗಳಲ್ಲಿ ಪಾಲ್ಗೊಳ್ಳುವ ಹಕ್ಕು ಮಕ್ಕಳಿಗೆ ಇದೆ.
ಎಂದು ಹೇಳಿದರು.
ಈ ಸಂದರ್ಭದಲ್ಲಿ : ಎಸ್.ವ್ಹಿ.ಎಮ್.ಪ್ರೌಡ ಶಾಲೆಯ
ಸಂಗಯ್ಯ.ವ್ಹಿ. ಕಾರ್ಯದರ್ಶಿಗಳು ,
ಚಂದ್ರಶೇಖರ.ನಾಯ್ಕ ಮುಖ್ಯೋಪಾಧ್ಯಾಯರು, ಶಿಕ್ಷಕರಾದ
ವೆಂಕಟರೆಡ್ಡಿ, ಮಾಬುಸಾಬ , ಸಂಜೀವ. ಬಾಕಲಿ ಹಾಗೂ ಪ್ರೌಡ ಶಾಲೆಯ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ:- ಮಂಜುನಾಥ ಕುಂಬಾರ