ಛತ್ತೀಸ್‌ಗಢ: ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಸುಕ್ಮದಲ್ಲಿ ನಡೆದಿದೆ.
ದಕ್ಷಿಣ ಬಿಜಾಪುರ-ಸುಕ್ಮದ ಕಾಡಿನಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ.
ಮೂರು ಜಿಲ್ಲೆಗಳಿಂದ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ, ಕೋಬ್ರಾದ ಐದು ಬೆಟಾಲಿಯನ್‌ಗಳು ಮತ್ತು ಸಿಆರ್‌ಪಿಎಫ್‌ನ 229ನೇ ಬೆಟಾಲಿಯನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಪೊಲಿಸ್ ಮೂಲಗಳು ತಿಳಿಸಿವೆ.