ಇಂಡಿ:- ಡಾ || ಬಿ. ಅರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚಿಗೆ ಜರುಗಿದ 2023 24 ನೇ ಸಾಲಿನ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಪಟ್ಟಣದ ಶ್ರೀ ಶಾಂತೇಶ್ವರ ಪದವಿ ಪೂರ್ವ ಕಾಲೇಜು ಇಂಡಿಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ 4 ವಿದ್ಯಾರ್ಥಿಗಳು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಮಾಡಿ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಎಂ ವಿ ಕಳ್ಳಿಮನಿ ಯವರಿಗೆ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಸರ್ವ ಸದಸ್ಯರು ,ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.
ವರದಿ. ತುಕಾರಾಮ ಪವಾರ