ಉಡುಪಿ :ನಂತರ ಭಾಸ್ಕರ್ ಎಂಬ ದಲಿತ ವ್ಯಕ್ತಿಗೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಮತ್ತು ಅವರ ಡ್ರೈವರ್ ಹಾಗೂ ಒಬ್ಬ ಕಾನ್ಸ್ಟೇಬಲ್ ಸೇರಿ ಮನಬಂದಂತೆ ಆತನನ್ನು ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಇದನ್ನು ಖಂಡಿಸಿ ಭೀಮವಾದ ದಲಿತ ಸಂಘರ್ಷ ಸಮಿತಿಯು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಉಡುಪಿಯ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಸಾಹೇಬರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಭೀಮವಾದ ಸಂಘರ್ಷ ಸಮಿತಿ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ :ರಾಜು ಮುಂಡೆ




