Ad imageAd image

​ಬಿಎಸ್ಪಿ ಪಕ್ಷದ ಪಾವಗಡ ತಾಲ್ಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Bharath Vaibhav
​ಬಿಎಸ್ಪಿ ಪಕ್ಷದ ಪಾವಗಡ ತಾಲ್ಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
WhatsApp Group Join Now
Telegram Group Join Now

ಪಾವಗಡ : ತಾಲ್ಲೂಕಿನ ನಿರೀಕ್ಷಣಾ ಮಂದಿರದಲ್ಲಿ ಶನಿವಾರ ನಡೆದ ಬಹುಜನ ಸಮಾಜ ಪಕ್ಷದ (BSP) ಪ್ರಮುಖ ಸಭೆಯಲ್ಲಿ ಪಾವಗಡ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

​ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷರಾದ ಅಂಜನಮೂರ್ತಿ ಎಂ. ಅವರು, “ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಕಾನ್ಶೀರಾಂ ಅವರ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತಾಗಲು ಸಂಘಟನೆ ಶಕ್ತಿಯುತವಾಗಬೇಕು. ಇಂದು ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳು ಪಕ್ಷದ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಿದ್ದಾರೆ,” ಎಂದು ತಿಳಿಸಿದರು.

​ನಂತರ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಕರ್ ಅವರು, “ಮುಂದಿನ ದಿನಗಳಲ್ಲಿ ಪಾವಗಡ ತಾಲ್ಲೂಕಿನಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸಲಾಗುವುದು ಎಂದರು.ನೂತನ ಪದಾಧಿಕಾರಿಗಳ ಪಟ್ಟಿ,​ಸಭೆಯಲ್ಲಿ ಈ ಕೆಳಗಿನವರನ್ನು ವಿವಿಧ ಜವಾಬ್ದಾರಿಗಳಿಗೆ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.
​ ಬಿಎಸ್ಪಿ ಪಾವಗಡ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಸಮಿತಿ ಅಧ್ಯಕ್ಷರು ಲಕ್ಷ್ಮೀಕಾಂತ್ ,​ಉಪಾಧ್ಯಕ್ಷರು ಅಶೋಕ್ ಬಿ.ಎಂ. ,​ಪ್ರಧಾನ ಕಾರ್ಯದರ್ಶಿಮಂಜುನಾಥ್ ,ಕಾರ್ಯದರ್ಶಿ ಅನಿಲ್ ಕುಮಾರ್,​ಖಜಾಂಚಿ ನರಸಿಂಹಪ್ಪ,BVF (ಬಹುಜನ ವಾಲಂಟರಿ ಫೋರ್ಸ್)ನಿತಿನ್,
​ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಗೋವಿಂದಯ್ಯ, ರಾಜ್ಯ ಸಮಿತಿ ಸದಸ್ಯರಾದ ರುದ್ರಪ್ಪ. ಕರಿಯಣ್ಣ. ಓಂಕಾರ. ಯಶ್ವಂತ್ . ನರಸಪ್ಪ. ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:ಶಿವಾನಂದ 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!