ಬೆಂಗಳೂರು : ಹಿರಿಯ ನಟ, ಕಲಾವಿದ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸಾಗಿದ್ದು, ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಗಿದ್ದರು. ಈಗ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ತಮ್ಮ ಅದ್ಭುತ ನಟನೆಯ ಮೂಲಕ ಅಪಾರ ಜನಮನ್ನಣೆಗಳಿಸಿದ್ದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಖ್ಯಾತಿಗಳಿಸಿದ್ದರು. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು.
ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಬ್ಯಾಂಕ್ ಜನಾರ್ದನ್ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಇವತ್ತು ಸಂಜೆ ವೇಳೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.




