ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಶಬಾನಾ ಅಜ್ಮಿ ಅವರು ಆಯ್ಕೆಯಾಗಿದ್ದಾರೆ.
2024 – 25ನೇ ಸಾಲಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿ ಆಯ್ಕೆಗೆ ರಚಿಸಿದ್ದ ಆಯ್ಕೆ ಸಮಿತಿಯು ಮೂವರು ಸಂಭಾವ್ಯರನ್ನು ಆಯ್ಕೆ ಮಾಡಿ ಪಟ್ಟಿ ಸಲ್ಲಿಸಿತ್ತು. ಆಯ್ಕೆಯಾಗಿದ್ದ ಮೂವರಲ್ಲಿ ನಟಿ ಶಬಾಬಾ ಅಜ್ಮಿ ಅವರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಬೆಂಗಳೂರಿನಲ್ಲಿ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ನಿಮಿತ್ತ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಅಜ್ಮಿ ಅವರಿಗೆ ಅಭಿನಂದನೆಗಳು” ಎಂದಿದ್ಧಾರೆ.
”70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ” ಎಂದು ಸಿಎಂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



