ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶನಿವಾರ ರಾಷ್ಟ್ರ ರಾಜಧಾನಿಯ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ.ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಮಾರ್ಚ್ನಲ್ಲಿ ಅಡ್ವಾಣಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ತಮ್ಮ ನಿವಾಸದಲ್ಲಿ ಸ್ವೀಕರಿಸಿದ್ದರು.