ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ(94) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಶಾಮನೂರು ಶಿವಶಂಕರಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೆಪಿಸಿಸಿ ಖಜಾಂಚಿಯಾಗಿ ಅನೇಕ ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆರು ಬಾರಿ ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ.



