Ad imageAd image

ಕಾಂಗ್ರೆಸ್ ಹಿರಿಯ ಸಂಸದ ವಸಂತರಾವ್ ಚೌಹಾಣ್ ವಿಧಿವಶ

Bharath Vaibhav
ಕಾಂಗ್ರೆಸ್ ಹಿರಿಯ ಸಂಸದ ವಸಂತರಾವ್ ಚೌಹಾಣ್ ವಿಧಿವಶ
WhatsApp Group Join Now
Telegram Group Join Now

ಕಾಂಗ್ರೆಸ್ ಹಿರಿಯ ಸಂಸದ ವಸಂತರಾವ್ ಚೌಹಾಣ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ.ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಚವಾಣ್ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ವಸಂತರಾವ್ ಚವಾಣ್ ಯಾರು?

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚವಾಣ್ ನಾಂದೇಡ್ ಕ್ಷೇತ್ರದಿಂದ 46 ಪ್ರತಿಶತದಷ್ಟು ಮತಗಳನ್ನು ಪಡೆಯುವ ಮೂಲಕ ಗೆದ್ದರು. ಅವರು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಖಲಿಕರ್ ಪ್ರತಾಪರಾವ್ ಗೋವಿಂದರಾವ್ ಅವರನ್ನು 50,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು.ಚವಾಣ್ ಅವರು ನೈಗಾಂವ್ನ ಜನತಾ ಹೈಸ್ಕೂಲ್ ಮತ್ತು ಕೃಷಿ ಕಾಲೇಜಿನ ಟ್ರಸ್ಟಿ ಮತ್ತು ಅಧ್ಯಕ್ಷರಾಗಿದ್ದಾರೆ. ಅವರು 2009 ರಲ್ಲಿ ನೈಗಾಂವ್ ನಿಂದ ಮಹಾರಾಷ್ಟ್ರ ವಿಧಾನಸಭೆಯ ಸ್ವತಂತ್ರ ಸದಸ್ಯರಾಗಿ ಆಯ್ಕೆಯಾದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!