ಬಾಗಲಕೋಟೆ : ಕಾಂಗ್ರೆಸ್ ಹಿರಿಯ ಶಾಸಕ ಹಾಗು ಮಾಜಿ ಸಚಿವ ಎಚ್ ವೈ ಮೇಟಿ (79) ನಿಧನರಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಲಿಂಗಾಯತ ಧಾರ್ಮಿಕ ವಿಧಿ ವಿಧಾನದ ಪ್ರಕಾರ ನಡೆಯಲಿದೆ.
ಹೆಚ್.ವೈ. ಮೇಟಿ ಅವರ ಸ್ವಗ್ರಾಮ ತಿಮ್ಮಾಪುರದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಬೆಂಗಳೂರಿನಿಂದ ಬಾಗಲಕೋಟೆಗೆ ಬೆಳಗ್ಗೆ ಪಾರ್ಥಿವಶರೀರ ತಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಂತರ ಅವರ ಸ್ವಗ್ರಾಮ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.




