ಬೆಂಗಳೂರು : ಬಿಎಸ್ ಯಡಿಯೂರಪ್ಪ ವಿರುದ್ಧದ ಫೋಕ್ಸೋ ಕಾಯ್ದೆ ವಿಚಾರ ಸದ್ಯ ಹೈ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದ್ದು , ಜಾಮೀನು ಸಡಿಲಿಕೆ ಕುರಿತು ವಾದ-ಪ್ರತಿವಾದ ನಡೆಯುತ್ತಿದೆ.
ಇವತ್ತು ನಡೆದ ವಿಚಾರಣೆ ಹಿರಿಯ ರಾಜಕಾರಣಿಗಳು ಕಿರಿಯರಿಗೆ ಮಾದರಿಯಾಗಬೇಕು ಎಂದು ನ್ಯಾಯಮೂರ್ತಿಗಳ ಪೀಠ ಅಭಿಪ್ರಾಯಪಟ್ಟಿದೆ.
ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಹಿರಿಯ ರಾಜಕಾರಣಿ ಆಗಿ ಖಂಡನೀಯ ಕೃತ್ಯ ನಡೆಸಬಾರದು ಇತರರಿಗೆ ಮಾದರಿಯಾಗಿರಬೇಕು ಎಂದು ಅಭಿಪ್ರಾಯಪಟ್ಟಿದೆ.
ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಕೆಗೆ ಮನವಿ ಮಾಡಿದರು. ಹಿರಿಯ ರಾಜಕಾರಣಿ ಆಗಿರುವುದರಿಂದ ದೆಹಲಿಗೆ ತೆರಳಬೇಕಿದೆ.
ಅಲ್ಲದೆ ರಾಜಕೀಯ ಪಕ್ಷದ ಸಂಸದೀಯ ಸಮಿತಿ ಸದಸ್ಯರಾಗಿದ್ದಾರೆ. ಹೀಗಾಗಿ ಷರತ್ತು ಸಡಿಲಿಸಲು ಬಿಎಸ್ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದರು.
ಹಿರಿಯ ರಾಜಕಾರಣಿಯಾಗಿ ಖಂಡನೀಯ ಕೃತ್ಯ ನಡೆಸಬಾರದು. ಇತರರಿಗೆ ಮಾದರಿಯಾಗುವಂತಹ ನಡವಳಿಕೆ ಇರಬೇಕು ಎಂದು ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.