ಬೆಂಗಳೂರು: ಸಾಯುವವರೆಗೆ ಶಿಕ್ಷೆ ವಿಧಿಸುವ ಅಧಿಕಾರವನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳು ಮಾತ್ರ ಹೊಂದಿವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಜೀವಾವಧಿ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆದೇಶ ರದ್ದು ಕೋರಿ 28 ವರ್ಷದ ರುದ್ರೇಶ್ ಎಂಬಾತ ಹೈಕೋರ್ಟ್ ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ನೇತೃತ್ವದ ವಿಭಾಗೀಯ ಪೀಠ, ರುದ್ರೇಶ್ ಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ಕೋರ್ಟ್ ಆದೇಶಿಸಿದೆ.
ಯಾವುದೇ ವಿನಾಯಿತಿ ಇಲ್ಲದೆ ಮರಣದಂಡನೆಗೆ ಬದಲಾಗಿ ಸಾಯುವವರೆಗೆ ಜೈಲು ಶಿಕ್ಷೆ ವಿಧಿಸುವ ಅಧಿಕಾರ ಸಾಂವಿಧಾನಿಕ ನ್ಯಾಯಾಲಯಗಳಾದ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮಾತ್ರ ಹೊಂದಿವೆ ಎಂದು ಸ್ಪಷ್ಟಪಡಿಸಿದೆ.
ರುದ್ರೇಶ್ ಗೆ ಸಾಯುವವರೆಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಆದೇಶವನ್ನು ಮಾರ್ಪಡಿಸಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 14 ವರ್ಷ ಜೈಲು ಶಿಕ್ಷೆ ಪೂರ್ಣಗೊಳಿಸಿದ ನಂತರ ಸನ್ನಡತೆ ಆಧಾರದಲ್ಲಿ ಕೈದಿಯನ್ನು ಸರ್ಕಾರ ಜೈಲಿನಿಂದ ಬಿಡುಗಡೆ ಮಾಡಬಹುದು. ಸಾಯುವವರೆಗೆ ಜೈಲು ಶಿಕ್ಷೆಯಾದರೆ ಜೈಲಿನಲ್ಲಿಯೇ ಜೀವ ಇರುವವರೆಗೂ ಇರಬೇಕಿದೆ.



