ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ.
ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ.
ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ, ಬಳಿಕ ಸಂಜೆ 4 ಗಂಟೆಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.




