ಕೊಲ್ಲಾಪುರ: ಕೊಲ್ಲಾಪುರದ ಮಹಾಲಕ್ಷ್ಮೀ ದೇವಿ ದೇವಸ್ಥಾನಕ್ಕೆ ತೆರಳಿದ್ದ ರಾಜ್ಯದ ಬಿಜೆಪಿ ಶಾಸಕ ಪ್ರಭು ಚೌವಾಣ್ ಅವರಿಗೆ ಶಿವಸೆನೆ ಮುಖಂಡರು ಅಡ್ಡಿಯುಂಟು ಮಾಡಿದ ಘಟನೆ ನಡೆದಿದೆ.
ಶಿವಸೇನೆ ಮುಖಂಡ ವಿಜಯ್ ದೇವಣೆ ನೇತೃತ್ವದಲ್ಲಿ ಅಡ್ಡಿಪಡಿಸಿದ್ದು, ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ ಗೆ ಯಾಕೆ ಅವಕಾಶ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವಿಚಾರವಾಗಿ ಶಿವಸೇನೆ ಮುಂಡರು ಶಾಸಕರೊಂದಿಗೆ ಕಿರಿಕ್ ತೆಗೆದಿದ್ದಾರೆ.
ಈ ವೇಳೆ ಪ್ರಭು ಚೌವ್ಹಾಣ್, ಕರ್ನಾಟಕದಲ್ಲಿ ಎಂಇಎಸ್ ನಿಷೇಧಿಸಲಾಗಿದೆ. ಬೆಳಗಾವಿಯಲ್ಲಿ ಅಧುವೇಶನ ನಡೆಯುತ್ತಿದ್ದು, ಎಂಇಎಸ್ ಮಹಾಮೇಳಾವ್ ಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.