ಕಂಪ್ಲಿ : ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕು ದಂಡಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಏರ್ಪಡಿಸಿದ ಶಿವಯೋಗಿ ಸಿದ್ಧರಾಮೇಶ್ವರ 853ನೇ ಜಯಂತಿ ಆಚರಣೆ ಮಾಡಲಾಯಿತು ರ ನಂತರ ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಕಂಪ್ಲಿ ತಾಲೂಕು ದಂಡಾಧಿಕಾರಿಗಳಾದ ಎಸ್ ಶಿವರಾಜ್ ಶಿವಪುರ ಅವರು ಭಾವಚಿತ್ರವರದಿಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿ ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ತಹಸೀಲ್ದಾರ್ ಎಸ್ ಶಿವರಾಜ್ ಶಿವಪುರ ಹೇಳಿದರು.
ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು.
ಈ ಸಂದರ್ಭದಲ್ಲಿ ಭೋವಿ ಸಮಾಜದ ಎಲ್ಲಾ ಮುಖಂಡರು ಕಂಪ್ಲಿ ತಾಲೂಕು ಆಡಳಿತ ಸಿಬ್ಬಂದಿಗಳು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ವರದಿ : ಚನ್ನಕೇಶವ