ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ಪುರುಷರೇ ಹೆಚ್ಚು : ಆಘಾತಕಾರಿ ಮಾಹಿತಿ ಬಹಿರಂಗ 

Bharath Vaibhav
ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ಪುರುಷರೇ ಹೆಚ್ಚು : ಆಘಾತಕಾರಿ ಮಾಹಿತಿ ಬಹಿರಂಗ 
Death
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರಲ್ಲಿ ಪುರುಷರೇ ಹೆಚ್ಚು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ ಬರೋಬ್ಬರಿ 28,324 ಮಂದಿ ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದರೆ, 8,159 ಮಹಿಳೆಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಉಳಿದಂತೆ ಬೆಳಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ತಲಾ 1 ಸಾವಿರಕ್ಕೂ ಅಧಿಕವಾಗಿದೆ.

ಬೆಂಗಳೂರು ನಗರದಲ್ಲಿ 4,839 ಪುರುಷರು, 1778 ಮಹಿಳೆಯರು, ಬೆಳಗಾವಿಯಲ್ಲಿ 1,896 ಪುರುಷರು, 462 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1159 ಪುರುಷರು, 379 ಮಹಿಳೆಯರು, ಶಿವಮೊಗ್ಗ ಜಿಲ್ಲೆಯಲ್ಲಿ 1,142 ಪುರುಷರು, 329 ಮಹಿಳೆಯರು, ತುಮಕೂರು ಜಿಲ್ಲೆಯಲ್ಲಿ 1006 ಪುರುಷರು, 337 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿದುಬಂದಿದೆ.

ಇನ್ನು ಆತ್ಮಹತ್ಯೆಗೆ ಸಾಲಬಾಧೆ, ಕಿರುಕುಳ ಕಾರಣ ಎನ್ನಲಾಗಿದ್ದು, ಕೃಷಿ ಸಾಲ, ಮಕ್ಕಳ ಶಿಕ್ಷಣ, ಮದುವೆ, ಹಬ್ಬ ಸೇರಿ ಇನ್ನಿತರ ಕಾರಣಕ್ಕಾಗಿ ಮಾಡಿದ ಸಾಲ ತೀರಿಸಲಾಗದೇ ಪುರುಷರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!