ಬೆಂಗಳೂರು: ಮಾಜಿ ಪ್ರಧಾನಿ H.D.ದೇವೇಗೌಡರಿಗೆ ಮತ್ತೊಂದು ಗೌರವ ಸಂದಿದ್ದು,’ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿಯನ್ನು ದೇವೇಗೌಡರಿಗೆ ನೀಡಿ ಸನ್ಮಾನಿಸಲಾಗಿದೆ. ದೇವೇಗೌಡ ಅಭಿನಂದನಾ ಸಮಿತಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು.
ಈ ವೇದಿಯಲ್ಲಿ ಮಾತನಾಡಿದ ದೇವೇಗೌಡರು, ಇದು ನನ್ನ ಜೀವನದ ಕೊನೆ ಹಂತ. ಈ ಸಂದರ್ಭದಲ್ಲಿ ನನ್ನ ಮೇಲಿನ ನಿಮ್ಮೆಲ್ಲರ ಪ್ರೀತಿ ನನ್ನ ಆತ್ಮಕ್ಕೆ ಸಮಾಧಾನ ತಂದಿದೆ. ರಾಜಕೀಯದಲ್ಲಿ ಸೋಲು, ಗೆಲುವು ಸಾಮಾನ್ಯ. ಅದಕ್ಕೆ ಯಾರು ತಲೆ ಕೆಡಿಸಿಕೊಳ್ಳಬಾರದು ಎಂದಿದ್ದಾರೆ.
ಇದೇ ವೇಳೆ ತಮ್ಮ ಜೀವನದುದ್ದಕ್ಕೂ ಜೊತೆಯಾಗಿ, ಬೆಂಬಲಿಸಿ, ಕಷ್ಟದ ಸಮಯದಲ್ಲಿ ತಮ್ಮ ಜೊತೆಗಿದ್ದು ಕೈಹಿಡಿದ ತಮ್ಮ ಪತ್ನಿ ಚನ್ನಮ್ಮ ಅವರ ಪ್ರೀತಿ ಮತ್ತು ತ್ಯಾಗವನ್ನು ನೆನೆದು ದೇವೇಗೌಡರು ಭಾವುಕರಾದರು.
ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ, ಸುತ್ತೂರು ಶ್ರೀಗಳು, ಮಾದಾರ ಚನ್ನಯ್ಯ ಶ್ರೀಗಳು, ನಂಜಾವಧೂತ ಶ್ರೀಗಳು ದೇವೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಿದರು.




