Ad imageAd image

ಸುಳ್ಳೇ ಬಿಜೆಪಿಯ ಮನೆ ದೇವರು. ಆರ್​​​​ಎಸ್​​​ಎಸ್​​​​​ ಸುಳ್ಳಿನ ಮಹಾ ಕಾರ್ಖಾನೆ : ಸಿದ್ಧರಾಮಯ್ಯ 

Bharath Vaibhav
ಸುಳ್ಳೇ ಬಿಜೆಪಿಯ ಮನೆ ದೇವರು. ಆರ್​​​​ಎಸ್​​​ಎಸ್​​​​​ ಸುಳ್ಳಿನ ಮಹಾ ಕಾರ್ಖಾನೆ : ಸಿದ್ಧರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು : ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಇನ್ನಿತರೆ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್, ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಆರ್ಭಟಿಸಿದರು.

ಸುಳ್ಳೇ ಬಿಜೆಪಿಯ ಮನೆ ದೇವರು. ಆರ್​​​​ಎಸ್​​​ಎಸ್​​​​​ ಸುಳ್ಳಿನ ಮಹಾ ಕಾರ್ಖಾನೆ ಎಂದ ಸಿಎಂ, ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ.

ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ಸುಳ್ಳಿನ ಕಾರ್ಖಾನೆ RSSನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಸಿಎಂ ಕರೆ ನೀಡಿದರು.

ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ ಎಂದು ಪ್ರಶ್ನಿಸಿದರು.

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿಯವರು ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿಯಾಗಿದ್ದಾರೆ. ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ.. ಹೋರಾಟ ನಡೆಸುತ್ತಿದೆ? ರೂ.4 ಹಾಲಿನ ದರ ಹೆಚ್ಚಿಸಿ ಈ 4 ರೂಪಾಯಿಯನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಸರ್ಕಾರಕ್ಕೆ ಬರಲ್ಲ ಎಂದು ಸಿಎಂ ಸ್ಪಷ್ಟಪಡಿಸದರು.

WhatsApp Group Join Now
Telegram Group Join Now
Share This Article
error: Content is protected !!