Ad imageAd image

ಶೀಘ್ರವೇ ವಿದ್ಯಾಸಿರಿ ಯೋಜನೆಯ ಮೊತ್ತ ಹೆಚ್ಚಳ : ಸಿದ್ಧರಾಮಯ್ಯ 

Bharath Vaibhav
ಶೀಘ್ರವೇ ವಿದ್ಯಾಸಿರಿ ಯೋಜನೆಯ ಮೊತ್ತ ಹೆಚ್ಚಳ : ಸಿದ್ಧರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು.

ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು.

ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

WhatsApp Group Join Now
Telegram Group Join Now
Share This Article
error: Content is protected !!