Ad imageAd image

ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ವಾಪಸ್ಸು ಕಳಿಸಲು ಕ್ರಮ : ಸಿದ್ಧರಾಮಯ್ಯ 

Bharath Vaibhav
ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ವಾಪಸ್ಸು ಕಳಿಸಲು ಕ್ರಮ : ಸಿದ್ಧರಾಮಯ್ಯ 
siddaramaiah
WhatsApp Group Join Now
Telegram Group Join Now

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗುವುದು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.

ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ?

ಇನ್ನು ಪಾಕಿಸ್ತಾನದ ಜೊತೆ ಯುದ್ಧ ಮಾಡಲೇಬೇಕಾದ ಅನಿವಾರ್ಯತೆ ತಲೆದೋರಿದೆಯಾ? ಯುದ್ಧ ಮಾಡಲೇಬೇಕಾದ ಸ್ಥಿತಿ ಎದುರಾದರೆ ನಿಮ್ಮ ನಿಲುವೇನು l ಅಂತ ಪತ್ರಕರ್ತರು ಪ್ರಶ್ನಿಸಿದರು.

ಇದಕ್ಕೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ, ಕೇಂದ್ರ ಸರ್ಕಾರ ಬಿಗಿ ಭದ್ರತೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು, ರಕ್ಷಣಾ ವ್ವವಸ್ಥೆಯನ್ನು ಸದೃಢಗೊಳಿಸಬೇಕು, ಜನಕ್ಕೆ ಖಂಡಿತವಾಗಿಯೂ ಯುದ್ಧ ಬೇಕಿಲ್ಲ, ಶಾಂತಿ ಮತ್ತು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.

WhatsApp Group Join Now
Telegram Group Join Now
Share This Article
error: Content is protected !!