ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಇರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ ಒಂದು ನೀಡಿದ್ದು ರಾಜ್ಯದ 140 ಶಾಸಕರು ಸೇರಿದಂತೆ ಸಿಎಂ ಸಿದ್ದರಾಮಯ್ಯ ಸಹ ನನ್ನ ಬೆಂಬಲಕ್ಕೆ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 140 ಶಾಸಕರು ಕೂಡ ನನ್ನ ಬೆಂಬಲಿಗರೇ.ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ಸಾರ್ವಜನಿಕವಾಗಿ ಚರ್ಚೆ ಮಾಡಲು ಆಗಲ್ಲ ಎಂದು ತಿಳಿಸಿದರು.
ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.




