Ad imageAd image

ಮಹಾಕುಂಭಮೇಳದಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಅಧಿಕಾರಿಗಳ ನೇಮಕ : ಸಿದ್ದರಾಮಯ್ಯ 

Bharath Vaibhav
ಮಹಾಕುಂಭಮೇಳದಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಅಧಿಕಾರಿಗಳ ನೇಮಕ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು : ಮಹಾಕುಂಭಮೇಳ ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!