ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದರು ಸಿಎಂ ಆಗುವ ಯೋಗ ಕಾಂಗ್ರೆಸ್ ನಲ್ಲಿತ್ತು : ಡಿ. ಕೆ ಸುರೇಶ್

Bharath Vaibhav
ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದರು ಸಿಎಂ ಆಗುವ ಯೋಗ ಕಾಂಗ್ರೆಸ್ ನಲ್ಲಿತ್ತು : ಡಿ. ಕೆ ಸುರೇಶ್
WhatsApp Group Join Now
Telegram Group Join Now

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಡಿ.ಕೆ. ಸುರೇಶ್, ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಡಾ. ಸಿ.ಎನ್. ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿದ್ದು, ಹೀಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.

ರಾಮನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಡಿ.ಕೆ. ಸುರೇಶ್, ಸಿದ್ದರಾಮಯ್ಯನವರನ್ನು ಜೆಡಿಎಸ್ ನಲ್ಲಿ ಸಸ್ಪೆಂಡ್ ಮಾಡಲಾಗಿತ್ತು. ಕಾಂಗ್ರೆಸ್ ಗೆ ಬಂದ ಅವರಿಗೆ ಮುಖ್ಯಮಂತ್ರಿಯಾಗುವ ಯೋಗ ಕೂಡಿ ಬಂದಿತ್ತು. ಜನಪರ ಕಾರ್ಯಕ್ರಮಗಳನ್ನು ಅವರು ನೀಡಿದ್ದು, ಇದನ್ನು ಮುಂದಿಟ್ಟುಕೊಂಡು ಮತ ಕೇಳೋಣ ಎಂದಿದ್ದಾರೆ.

ಯಾರ ಬೆಳವಣಿಗೆಗೂ ಅಡ್ಡಿಯಾಗಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಡಿ.ಕೆ. ಸುರೇಶ್, ನಾಳೆ ದಿನ ಯೋಗ ಕೂಡಿ ಬಂದರೆ ನಿಮಗೂ ಒಳ್ಳೆಯ ಭವಿಷ್ಯ ಇರುತ್ತದೆ. ಹೀಗಾಗಿ ಎಲ್ಲರನ್ನೂ ಜೊತೆಯಾಗಿಟ್ಟುಕೊಂಡು ಮುಂದೆ ನಡೆಯೋಣ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶ್ರಮಿಸೋಣ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!