Ad imageAd image

ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ : ಸಿದ್ದರಾಮಯ್ಯ ಸಂತಾಪ

Bharath Vaibhav
ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ : ಸಿದ್ದರಾಮಯ್ಯ ಸಂತಾಪ
WhatsApp Group Join Now
Telegram Group Join Now

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು.

ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ.

ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು.

ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು.

ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!