Ad imageAd image

ಸಚಿವ ಸಂಪುಟ ಪುನಾರಚನೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ : ಸಿದ್ದರಾಮಯ್ಯ 

Bharath Vaibhav
ಸಚಿವ ಸಂಪುಟ ಪುನಾರಚನೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ಹಲವು ವಿಷಯಗಳು ಕುರಿತು ಚರ್ಚೆ ನಡೆಸಿದ್ದಾರೆ.

ಆರ್‌ಸಿಬಿ ಅಭಿಮಾನಿಗಳ ಸಾವು, ಸದಾ ಈ ಜಾತಿಗಣತಿ ಸಮೀಕ್ಷೆ ನಡೆಸುವ ಬಗ್ಗೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಇನ್ನು ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವರಿಷ್ಠರನ್ನು ಭೇಟಿಯಾದ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಯಾವುದೇ ರೀತಿಯಾದ ಚರ್ಚೆ ಸಭೆಯಲ್ಲಿ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಇನ್ನು ಬೆಂಗಳೂರಿನ ಕಾಲ್ತುಳಿತದ ದುರಂತದ ಕುರಿತು, ಕಾಲ್ತುಳಿತದ ದುರಂತದಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ವಿವರಣೆ ನೀಡಿದ್ದೇವೆ. ಸಿಐಡಿ ನ್ಯಾ. ಕುನ್ಹಾ ನೇತೃತ್ವದ ತನಿಖೆಯ ಬಗ್ಗೆ ವರಿಷ್ಠ ರಿಗೆ ಮಾಹಿತಿ ನೀಡಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಇಂಟಲಿಜೆನ್ಸ್ ಮುಖ್ಯಸ್ಥರ ವರ್ಗಾವಣೆ ಈ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇವೆ.

11 ಜನರು ಸಾಯಬಾರದಿತ್ತು ಈ ಘಟನೆಯಿಂದ ನೋವಾಗಿದೆ ಸಮರ್ಥನೆಗೆ ಕುಂಭಮೇಳದ ಘಟನೆಯನ್ನು ತೆಗೆದುಕೊಳ್ಳುವುದಿಲ್ಲ ರಾಜ್ಯದಲ್ಲಿ ನಡೆದ ಘಟನೆ ಯಿಂದ ನೋವಾಗಿದೆ ತನಿಖೆಯ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!