Ad imageAd image

ಸಿದ್ದರಾಮಯ್ಯನವರಿಗೆ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲ : ಆರ್ ಅಶೋಕ್ 

Bharath Vaibhav
ಸಿದ್ದರಾಮಯ್ಯನವರಿಗೆ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲ : ಆರ್ ಅಶೋಕ್ 
R ASHOK
WhatsApp Group Join Now
Telegram Group Join Now

ಬೆಂಗಳೂರು : ಪಾಕಿಸ್ತಾನದ ಜೊತೆಗೆ ಯುದ್ಧ ಅನಿವಾರ್ಯತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಮನಸ್ಥಿತಿ ಮುಸ್ಲಿಮರ ಮತ ಬಗ್ಗೆ ಯೋಚಿಸುತ್ತಿದೆ.

ಹಾಗಾದರೆ ಸತ್ತಿರುವವರ ಪ್ರಾಣಕ್ಕೆ ಬೆಲೆಯೇ ಇಲ್ಲವೇ? ಹಮಾಸ್ ಉಗ್ರರು ಬಂದು ತರಬೇತಿ ನೀಡಿ ಕಳುಹಿಸಿರುವ ಮಾಹಿತಿ ಇದೆ. ಇದನ್ನು ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದಷ್ಟೇ. ದೇಶಕ್ಕೆ ಏನೇ ಆದರೂ ಪರವಾಗಿಲ್ಲ ಮತ ಬಿದ್ದರೆ ಸಾಕು ಎಂಬ ಮನಸ್ಥಿತಿ ಇದೆ. ಸಿದ್ಧಾಂತವೇ ಇಲ್ಲದ ಸಿದ್ದರಾಮಯ್ಯ ಇಂದು ನಮ್ಮ ಮುಂದೆ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ.ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ ದಾಳಿ ಆಗಿದೆ.

ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆಗೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು.

ಇದಕ್ಕಾಗಿಯೇ ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ನಡೆಸಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನ ಬೆಂಬಲಿಸುತ್ತೇವೆ ಎಂದು ಹೇಳಿವೆ.

ನಮ್ಮ ದೇಶದಲ್ಲಿ ವೃತ್ತಿಪರ ಸೇನಾಪಡೆಗಳಿವೆ. ಯಾವ ಸಂದರ್ಭದಲ್ಲಿ ಎಂತಹ ಕ್ರಮ ಕೈಗೊಳ್ಳಬೇಕು ಎನ್ನುವ ಪರಿಣಿತಿ, ಅನುಭವ ನಮ್ಮ ಸೇನಾಪಡೆಗಳಿವೆ. ಈ ವಿಷಯದಲ್ಲಿ ನಿಮ್ಮ ಸಲಹೆಯ ಅಗತ್ಯವೂ ಇಲ್ಲ, ಸಲಹೆ ನೀಡುವ ಯಾವುದೇ ಅರ್ಹತೆಯೂ ತಮಗಿಲ್ಲ.

ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶಿ, ರೋಹಿಂಗ್ಯ, ಪಾಕಿಸ್ತಾನಿ ಅಕ್ರಮ ವಲಸಿಗರು ರಾಜಾರೋಷವಾಗಿ ತಿರುಗಾಡಿಕೊಂಡಿದ್ದಾರೆ. ಮೊದಲು ಅವರನ್ನ ಗುರುತಿಸಿ, ಗಡೀಪಾರು ಮಾಡಿ ಕನ್ನಡಿಗರ ಸುರಕ್ಷತೆ ಕಾಪಾಡುವ ಕಡೆ ಗಮನ ಕೊಡಿ. ಸುಮ್ಮನೆ ತಮ್ಮದಲ್ಲದ ವಿಷಯದಲ್ಲಿ ಅನಾವಶ್ಯಕವಾಗಿ ಮೂಗು ತೂರಿಸಬೇಡಿ.

WhatsApp Group Join Now
Telegram Group Join Now
Share This Article
error: Content is protected !!