Ad imageAd image

ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿದ್ದರಾಮಯ್ಯ 

Bharath Vaibhav
ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿದ್ದರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡನೆಗೆ ಸಜ್ಜಾಗುತ್ತಿದ್ದು, ಇಂದಿನಿಂದ ಬಜೆಟ್ ಪೂರ್ವ ಭಾವಿ ಸಭೆ ನಡೆಸಿದ್ದಾರೆ.

ಸಿದ್ದರಾಮಯ್ಯನವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದು, ಈ ಬಾರಿ ಅವರ 16ನೇ ಬಜೆಟ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.

2026-27ನೇ ಸಾಲಿನ ಆಯವ್ಯಯದ ಪೂರ್ವಭಾವಿ ಸಭೆಯ ಭಾಗವಾಗಿ ಇಂದು ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಇಲಾಖೆ ಈ ವರೆಗಿನ ಸಾಧನೆಗಳು ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ, ತೆರಿಗೆ ಸಂಗ್ರಹದ ಗುರಿ ಮತ್ತು ವಿವಿಧ ಇಲಾಖೆಗಳ ಬೇಡಿಕೆ. , ಮುಂಬರುವ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಬೇಕು ಎಂಬುದರ ಬಗ್ಗೆ ಸಿಎಂ ಸಭೆ ನಡೆಸಲಿದ್ದಾರೆ.

ಅದೇ ರೀತಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಬೇಕಾದ ಬೃಹತ್ ಮೊತ್ತದ ಹಣಕಾಸು ಹೊಂದಾಣಿಕೆಯ ಬಗ್ಗೆ ವಿಶೇಷ ಗಮನ ಹರಿಸಲು ನಿರ್ಧರಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!