Ad imageAd image

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿದ್ದರಾಮಯ್ಯ 

Bharath Vaibhav
ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿದ್ದರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು:‌ ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ. ಈ ಸಂಬಂಧ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ.

ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ ಎಂದಿದ್ದಾರೆ.

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಸಿಎಂ ಹೇಳಿದ್ದಾರೆ.

ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಪ್ರಟಣೆಯಲ್ಲಿ ವಿವರಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!