Ad imageAd image

ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಒಳ ಮೀಸಲಾತಿ ಜಾರಿ : ಸಿದ್ದರಾಮಯ್ಯ 

Bharath Vaibhav
ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಒಳ ಮೀಸಲಾತಿ ಜಾರಿ : ಸಿದ್ದರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು: ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಸಿಎಂ ಮಾತುಗಳ ಸಾರಾಂಶ

ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು.

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ನಾವು ಸದಾ ಬದ್ಧರಿದ್ದು, ಈ ನಿಟ್ಟಿನಲ್ಲಿ ಒಳಮೀಸಲಾತಿ ಜಾರಿ ಒಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!