ಬೆಂಗಳೂರು : ‘ಮನ್ ರೇಗಾ’ ಹೆಸರು ಬದ್ಲಾವಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಸಚಿವರು ಆಗಮಿಸಿದ್ದಾರೆ.
ಪ್ರತಿಭಟನಾ ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ ದುರುದ್ದೇಶದಿಂದ ವಿಬಿಜಿ ರಾಮ್ ಜಿ ಯೋಜನೆ ಜಾರಿ ಮಾಡಿದ್ದಾರೆ. ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆಯನ್ನು ಜಾರಿ ಮಾಡಿದ್ದಾರೆ. ಈ ಯೋಜನೆಯಲ್ಲಿ ದಶರಥರಾಮ ಇಲ್ಲ, ಕೌಸಲ್ಯ ರಾಮ ಇಲ್ಲ, ಹಾಗೆ ಸೀತಾರಾಮ ಸಹ ಇಲ್ಲ.
ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಪಕ್ಷ ಮಾತ್ರ. ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದಾರೆ.
ಇದಕ್ಕೆ ಆರ್ ಎಸ್ ಎಸ್ ನವರು ಮಾರ್ಗದರ್ಶನ ಮಾಡುತ್ತಾರೆ. ಆರ್ ಎಸ್ ಎಸ್ ನವರಿಗೆ ಬಡವರು ಸೇವಕರಾಗಿಯೇ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.




