ಬಾಗಲಕೋಟೆ: ತಮಿಳುನಾಡಿನಲ್ಲಿ ಕೈಗೊಂಡಂತೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ ( RSS) ವಿರುದ್ಧ ಕರ್ನಾಟಕದಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ರಾಜ್ಯದ ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.
ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದರು.
ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.




