Ad imageAd image

ಪ್ರಧಾನಿ ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ : ಸಿದ್ದರಾಮಯ್ಯ

Bharath Vaibhav
ಪ್ರಧಾನಿ ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ : ಸಿದ್ದರಾಮಯ್ಯ
siddaramaiah
WhatsApp Group Join Now
Telegram Group Join Now

ಬೆಂಗಳೂರು : ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ, ಪ್ರಧಾನಿ ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ 1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ.

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ.

ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ, ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು ಎಂದರು.

2013-18 ರ ವರೆಗೆ ನಾನು ಮುಖ್ಯಮಂತ್ರಿಯಾಗಿ ಎಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದ್ದೆ. ಇಡೀ ರಾಜ್ಯದಲ್ಲಿ ಅನ್ನಭಾಗ್ಯದಿಂದ ರೈತರ ಸಾಲಮನ್ನಾವರೆಗೂ ಎಷ್ಟೆಷ್ಟು ಕೆಲಸ ಮಾಡಿದ್ದೆ. ಆದರೂ ನಮಗೆ 2018 ರಲ್ಲಿ ಹಿನ್ನಡೆಯಾಗಿದ್ದು ನೋವು ತಂದಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಗೆ ನೆಲೆಯೇ ಇಲ್ಲ.
ಇಲ್ಲಿ ಬಿಜೆಪಿ ಠೇವಣಿಯನ್ನು ಕಳೆದುಕೊಂಡಿರುವ ಉದಾಹರಣೆಯೇ ಹೆಚ್ಚು. ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿರುವ ಕೆಲಸಗಳು ಕಣ್ಣಿಗೆ ಕಾಣುತ್ತಿವೆ. ಆದ್ದರಿಂದ ಚಾಮುಂಡೇಶ್ವರಿ ಕ್ಷೇತ್ರದ ಜನ ತೀರ್ಮಾನ ಮಾಡಿದರೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕತೆ ಮುಗಿಯತ್ತದೆ.

ಆದ್ದರಿಂದ ನನಗೆ ಗೌರವ ಕೊಡಬೇಕೆಂದರೆ ಚಾಮುಂಡೇಶ್ವರಿಯಲ್ಲಿ ಲೋಕಸಭೆಗೆ ಅತಿ ಹೆಚ್ಚು ಲೀಡ್ ಕೊಡಿಸಿ.ಇನ್ನು ನಾಲ್ಕು ವರ್ಷಗಳು ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷಗಳು ತುಂಬುತ್ತೆ, ಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!