ನವದೆಹಲಿ: ಭಾರತದ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದ್ದು, ಕೆಲವು ಮುಖ್ಯಮಂತ್ರಿ ಆಸ್ತಿ ವಿವರ ದಂಗಾಗಿಸುತ್ತೆ.
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು 931 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು 322 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಮುಖ್ಯಮಂತ್ರಿಗಳ ಪೈಕಿ 3ನೇ ಸ್ಥಾನದಲ್ಲಿದ್ದಾರೆ.
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಆಸ್ತಿ ಹೊಂದಿದ್ದಾರೆ. ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 55 ಲಕ್ಷ ರೂ. ಮೌಲ್ಯದ ಆಸ್ತಿ ಹೊಂದಿದ್ದರೆ, ಕೇರಳ ಸಿಎಂ ಪಿಣರಾಯಿ ವಿಜಯನ್ 1 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದಾರೆ.
ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು 180 ಕೋಟಿ ರೂ. ಸಾಲ ಹೊಂದಿದ್ದಾರೆ, ಸಿದ್ದರಾಮಯ್ಯ 23 ಕೋಟಿ ರೂ., ಚಂದ್ರಬಾಬು ನಾಯ್ಡು 10 ಕೋಟಿ ರೂ. ಸಾಲ ಹೊಂದಿದ್ದಾರೆ ಎಂದು ವರದಿ ಬಹಿರಂಗಪಡಿಸಿದೆ.