Ad imageAd image

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ : ಸಿದ್ಧರಾಮಯ್ಯ 

Bharath Vaibhav
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ : ಸಿದ್ಧರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು : ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ.

ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು-ಒಳಸಂಚುಗಳು ನಡೆಯುತ್ತಲೇ ಬಂದಿದೆ.

ಬಸವಣ್ಣ ಏನು ತಪ್ಪು ಮಾಡಿದ್ದರು? ಜಾತಿ ವಿನಾಶಕ್ಕೆ ಪ್ರಯತ್ನ ಮಾಡಿದ್ದರು, ಅಂತರಜಾತಿ ಮದುವೆ ಮಾಡಿಸಿದ್ದರು, ಅವಕಾಶ ವಂಚಿತ ತಬ್ಬಲಿ ಜಾತಿಗಳಿಗೆ ಸ್ವಾಭಿಮಾನದ ದೀಕ್ಷೆ ಕೊಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದರು. ಈ ಕಾರಣಕ್ಕಾಗಿ ಅವರನ್ನು ವ್ಯವಸ್ಥಿತ ಸಂಚಿನ ಮೂಲಕ ಮುಗಿಸಲಾಯಿತು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!