ಬೆಂಗಳೂರು : ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಅಲ್ಲದೇ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವುದರಿಂದ ರಾಜ್ಯದ ಉತ್ತರ ಕರ್ನಾಟಕ ಭಾಗದ ಜಿಲ್ಲೆಯ ಜನ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ನಿಟ್ಟಿನಲ್ಲಿ ಮಹಾರಾಷ್ಟ್ರದ ಕೊಯ್ನಾ ಮತ್ತು ಉಜ್ಜಿನಿ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಅಲ್ಲಿನ ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರದ ಮೂಲಕ ವಿನಂತಿಸಿದ್ದಾರೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜನರು ಹೆಚ್ಚುತ್ತಿರುವ ತಾಪಮಾನ ಮತ್ತು ಖಾಲಿಯಾದ ಜಲಾಶಯಗಳಿಂದಾಗಿ ಕುಡಿಯುವ ನೀರಿನ ಬಿಕ್ಕಟ್ಟನ್ನು ಜಾನುವಾರುಗಳೂ ಸಹ ಎದುರಿಸುವಂತಾಗಿದೆ.
ಸಂಕಷ್ಟದಲ್ಲಿರುವರ ಜನ ಮತ್ತು ಜಾನುವಾರುಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ನೀರು ಪೂರೈಸುವುದು ಅಗತ್ಯವೆಂದಿರುವ ಸಿಎಂ, ಭೀಮಾ ಮತ್ತು ಕೃಷ್ಣಾ ನದಿ ಮೂಕ ನೀರಿ ಹರಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಮಾರ್ಚ್ ನಿಂದ ಈ ಜಿಲ್ಲೆಗಳಲ್ಲಿ ನೀರಿ ಅಭಾವ ಎದುರಾಗಿದೆ ಎಂದು ಉಲ್ಲೇಖಿಸಿದ್ದಾರೆ.