Ad imageAd image

ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲಾಗಿದೆ : ಸಿದ್ದರಾಮಯ್ಯ

Bharath Vaibhav
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲಾಗಿದೆ : ಸಿದ್ದರಾಮಯ್ಯ
siddaramaiah
WhatsApp Group Join Now
Telegram Group Join Now

ಬೆಂಗಳೂರು : ವಿಧಾನಸೌಧದಲ್ಲಿ ಜಾತಿ ಗಣತಿ ವರದಿ ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ವಿಧಾನಸೌಧದಲ್ಲಿ ಜಾತಿ ಗಣತಿ ವರದಿ ಮಂಡಿಸಲಾಗಿದೆ.

ಏ.17 ರಂದು ವಿಶೇಷ ಸಂಪುಟ ಸಭೆ ಕರೆಯಲಾಗಿದೆ.ಅಂದು ಜಾತಿ ಗಣತಿ ಬಗ್ಗೆ ಚರ್ಚಿಸಲಾಗುತ್ತದೆ. ಚರ್ಚೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಏ.17 ರಂದು ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಏ.17 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಜಾತಿ ಗಣತಿ ವರದಿ ಅನುಷ್ಟಾನ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2024 ರಲ್ಲಿ ಸಲ್ಲಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಅಂತಿಮ ವರದಿಯನ್ನು ರಾಜ್ಯ ಸರ್ಕಾರ ಇಂದು ಮಂಡಿಸಿದೆ. .

ಎಚ್.ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015 ರಲ್ಲಿ ಕೈಗೊಂಡ ಜಾತಿಗಣತಿ ಆಧರಿಸಿ ಜಯಪ್ರಕಾಶ್ ಹೆಗಡೆ ಅವರುಅಂತಿಮ ವರದಿ ಸಲ್ಲಿಸಿದ್ದು, ಇದಕ್ಕೆ ವೀರಶೈವರು, ಒಕ್ಕಲಿಗರು, ಹಿಂದುಳಿದ ವರ್ಗದ ಪ್ರಬಲ ಜಾತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಸಾರ್ವಜನಿಕರ ಮನೆಮನೆಗೆ ಭೇಟಿ ನೀಡದೇ ವರದಿ ತಯಾರಿಸುವ ಈ ವರದಿ ಬಗ್ಗೆ ವಿಪಕ್ಷಗಳು ಗುಮಾನಿ ವ್ಯಕ್ತಪಡಿಸಿದೆ. ಇದನ್ನು ತಿರಸ್ಕರಿಸಬೇಕೆಂಬ ಒತ್ತಾಯಗಳು ಕೂಡ ಕೇಳಿಬಂದಿದೆ.

WhatsApp Group Join Now
Telegram Group Join Now
Share This Article
error: Content is protected !!