Ad imageAd image

ಕರ್ನಾಟಕ ಕಂಡ ಅತ್ಯಂತ ಪೆದ್ದ ಮುಖ್ಯಮಂತ್ರಿ ಅಂದರೆ ಸಿದ್ದಾರಮಯ್ಯ : ಆರ್ ಅಶೋಕ್ 

Bharath Vaibhav
ಕರ್ನಾಟಕ ಕಂಡ ಅತ್ಯಂತ ಪೆದ್ದ ಮುಖ್ಯಮಂತ್ರಿ ಅಂದರೆ ಸಿದ್ದಾರಮಯ್ಯ : ಆರ್ ಅಶೋಕ್ 
R ASHOK
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ಕಂಡ ಅತ್ಯಂತ ಅಸಮರ್ಥ, ಪೆದ್ದ ಮುಖ್ಯಮಂತ್ರಿ ಅಂದರೆ ಅದು ತಾವೇ ಮಿಸ್ಟರ್ ಸಿದ್ದಾರಮಯ್ಯನವರೇ. ಇತಿಹಾಸ ನಿಮ್ಮನ್ನ ಕರೆಯುವುದು ಹೀಗೆ. ನೆನಪಿಡಿ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಆರ್.‌ ಅಶೋಕ್‌, ಅಸಮರ್ಥ ಸಿಎಂ ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು ದಿಟ್ಟ ಪ್ರಶ್ನೆಗಳು ಎದುರಾದಾಗ ಅಹಂಕಾರದ ಮಾತುಗಳನ್ನಾಡಿ ವೈಯಕ್ತಿಕ ನಿಂದನೆ ಮಾಡುವುದು.

ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ದಿಕ್ಕು ತಪ್ಪಿಸುವುದು, ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು. ಪುಕ್ಕಟೆ ಪ್ರಚಾರ ಪಡೆಯುವುದು. ನಾನೊಬ್ಬನೇ ಮಹಾ ಬುದ್ಧಿವಂತ ಎಂದು ಗರ್ವ ಪಡುವುದು.

ನಿಮ್ಮ ಈ ಆಟಗಳು ಇನ್ನು ಮುಂದೆ ನಡೆಯುವುದಿಲ್ಲ ಮಿಸ್ಟರ್ ಸಿದ್ದರಾಮಯ್ಯ ಅವರೇ. ಗೆದ್ದಲು ಕಷ್ಟ ಪಟ್ಟು ಹುತ್ತ ಕಟ್ಟುತ್ತದೆ. ಹುತ್ತ ಕಟ್ಟಲು ಯಾವುದೇ ರೀತಿಯಲ್ಲಿಯೂ ಸಾಮರ್ಥ್ಯವಿಲ್ಲದ ಹಾವು ಮಾತ್ರ ಕಟ್ಟುವ ಕಾರ್ಯವೆಲ್ಲಾ ಮುಗಿದ ಮೇಲೆ ಹುತ್ತದೊಳಗೆ ಕೂರುತ್ತದೆ. ಇದು ನಿಮ್ಮ ಯೋಗ್ಯತೆ ಎಂದು ಕಿಡಿಕಾರಿದ್ದಾರೆ.

ಮತ್ತೊಮ್ಮೆ ಎಚ್ಚರಿಕೆ ನೀಡುತ್ತಿದ್ದೇನೆ. ನಾಲ್ಕು ಅಹಂಕಾರದ ಮಾತುಗಳನ್ನಾಡಿದ ಮಾತ್ರಕ್ಕೆ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂಬ ಭ್ರಮೆಯಿಂದ ಹೊರಗೆ ಬನ್ನಿ. ನಿಮ್ಮ ಅಹಂಕಾರದ, ದರ್ಪದ ಮಾತುಗಳು ನಿಮ್ಮ ಚಾರಿತ್ರ್ಯವನ್ನ ಪ್ರದರ್ಶನ ಮಾಡುತ್ತವೆಯೇ ಹೊರತು ಅದರಿಂದ ನನಗೆ ಯಾವುದೇ ನಷ್ಟವಿಲ್ಲ.

ನಿಮ್ಮ ಅಹಂಕಾರದಿಂದ ನನ್ನ ದನಿ ಅಡಗಿಸಲೂ ಸಾಧ್ಯವಿಲ್ಲ. ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ತಮ್ಮ ವೈಫಲ್ಯ, ದಡ್ಡತನವನ್ನ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಬಗ್ಗೆ ಯಾಕೆ ಟೀಕೆ ಮಾಡುತ್ತೀರಿ ಅಸಮರ್ಥ ಸಿಎಂ ಸಿದ್ದರಾಮಯ್ಯನವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!