Ad imageAd image

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. :ಸಿದ್ದರಾಮಯ್ಯ 

Bharath Vaibhav
ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. :ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ವಿಜಯಪುರ : ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ.

ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು. ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು..!

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ.

ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!