Ad imageAd image

ಸೆಪ್ಟೆಂಬರ್ 22 ರಿಂದ ಹೊಸ ಜಾತಿ ಗಣತಿ ಆರಂಭ : ಸಿದ್ದರಾಮಯ್ಯ 

Bharath Vaibhav
ಸೆಪ್ಟೆಂಬರ್ 22 ರಿಂದ ಹೊಸ ಜಾತಿ ಗಣತಿ ಆರಂಭ : ಸಿದ್ದರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯ ಸರ್ಕಾರ ಹೊಸ ಜಾತಿ ಗಣತಿ ನಡೆಸುವ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ ಎಂದು ಬೆಂಗಳೂರಿನ ಗೃಹಕಚೇರಿ ಕೃಷ್ಣ ದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ. ಬಳಿಕ ಜಯಪ್ರಕಾಶ್ ಹೆಗಡೆ ಹಿಂದುಳಿದ ಆಯೋಗದ ಅಧ್ಯಕ್ಷರಾದರು. 2015 ರಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆಗಿತ್ತು. 10 ವರ್ಷ ಆಗಿದೆ ಅಂತ ಹೊಸ ಸಮೀಕ್ಷೆಗೆ ತೀರ್ಮಾನ ಆಗಿದೆ. ಸಮೀಕ್ಷೆ ಜವಾಬ್ದಾರಿ ಹಿಂದುಳಿದ ಆಯೋಗಕ್ಕೆ ವಹಿಸಿದ್ದೇನೆ.

ಜಾತಿ, ಧರ್ಮ ಹಾಗೂ ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಗೊತ್ತಾಗಬೇಕು. ಅವರ ಹಿನ್ನೆಲೆ ಗೊತ್ತಾದಾಗ ವಿಶೇಷ ಕಾರ್ಯಕ್ರಮ ರೂಪಿಸಬಹುದು ಹಿಂದೆ ಕಾಂತರಾಜು ಅಧ್ಯಕ್ಷತೆಯಲ್ಲಿ ಸಮೀಕ್ಷೆ ಮಾಡಲು ಸೂಚಿಸಿದ್ದೆ ಆ ವರದಿ ಹಳೆಯದು ಅಂತ ಪರಿಗಣನೆ ಮಾಡಲಿಲ್ಲ. ಈಗ ಹೊಸದಾಗಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ.

7 ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ.

ಆಯೋಗದಲ್ಲಿ ಅಧ್ಯಕ್ಷರು ಮತ್ತು 5 ಸದಸ್ಯರಿದ್ದಾರೆ ಮಧುಸೂದನ್ ನಾಯಕ ಅಧ್ಯಕ್ಷತೆಯಲ್ಲಿ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ದಸರಾ ರಜೆ ಇದೆ ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆ ಜವಾಬ್ದಾರಿ ನೀಡಲಾಗಿದೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ಸರ್ವೆಗೆ ಬಳಕೆ ಮಾಡಲಾಗುತ್ತದೆ 1,75,000 ಉಪಾಧ್ಯಾಯರನ್ನು ನೇಮಕ ಮಾಡುತ್ತಿದ್ದೇವೆ. ಸರ್ವೆ ಮಾಡುವವರಿಗೆ ವೇತನ ನೀಡಲು 325 ಕೋಟಿ ಖರ್ಚು ಮಾಡಲಾಗುತ್ತಿದೆ ತಾತ್ಕಾಲಿಕವಾಗಿ 420 ಕೋಟಿ ರೂಪಾಯಿ ಕೊಡುವುದಾಗಿ ಹೇಳಿದ್ದೇನೆ. ಡಿಸೆಂಬರ್ ಒಳಗೆ ಸಮೀಕ್ಷೆ ವರದಿ ನೀಡುವುದಾಗಿ ಹೇಳಿದ್ದಾರೆ.

ವೈಜ್ಞಾನಿಕವಾಗಿ ಜಾತಿಗಣತಿ ಆಗಬೇಕು ಯಾರನ್ನು ತಪ್ಪಿಸಬಾರದು ಎಲ್ಲರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಸಮೀಕ್ಷೆ ವೇಳೆ 60 ಪ್ರಶ್ನೆಗಳನ್ನು ಕೇಳುತ್ತಾರೆ ಈ ಹಿಂದೆ ಕಾಂತರಾಜ್ ವರದಿ ಸಮೀಕ್ಷೆಯ ವೇಳೆ 54 ಪ್ರಶ್ನೆಗಳನ್ನು ಕೇಳಿತ್ತು ಉದ್ಯೋಗ ಧರ್ಮ ಶಿಕ್ಷಣ ಜಮೀನು ಸೇರಿದಂತೆ ಅನೇಕ ಪ್ರಶ್ನೆ ಕೇಳುತ್ತಾರೆ ಅರವತ್ತು ಪ್ರಶ್ನೆಗಳಿಗೂ ಜನರು ಉತ್ತರ ಕೊಡಬೇಕು ಒಂದು ವೇಳೆ ಮನೆಯಲ್ಲಿ ಇಲ್ಲದಿದ್ದರೆ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು. 8050770004 ಈ ಒಂದು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು.ರು ಆಧಾರ್ ಪಡಿತರ ಚೀಟಿ ಇದ್ದರೆ ಮೊಬೈಲ್ ಗೆ ಲಿಂಕ್ ಮಾಡುತ್ತಾರೆ ಮೊಬೈಲ್ ಇಲ್ಲದಿದ್ದರೆ ಆ ಮನೆಗಳ ಸರ್ವೆ ಕೂಡ ಮಾಡುತ್ತಾರೆ.ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.a

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!